ಸೆಪ್ಟೆಂಬರ್ 27; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 27: ಗುಲಾಬ್ ಚಂಡಮಾರುತ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. ಕರಾವಳಿ ಭಾಗದಲ್ಲಿ ಸ್ಪಲ್ಪ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಬಂಗಾಳಕೊಲ್ಲಿಯ ಈಶಾನ್ಯ ಮತ್ತು ಪೂರ್ವ ಮಧ್ಯಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಆಗಾಗ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

ಚಂಡಮಾರುತ ಪ್ರಭಾವ ಇಲ್ಲದಿದ್ದರೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬಿಸಿಲು ಇದ್ದು, ಆಗಾಗ ಮೋಡ ಕವಿದ ವಾತಾವರಣ ಸೃಷ್ಟಿಯಾಗುತ್ತಿದೆ. ಶನಿವಾರ ನಗರದಲ್ಲಿ ಮಳೆಯಾಗಿತ್ತು. ಭಾನುವಾರ ಮೋಡ ಕವಿದ ವಾತಾವರಣವಿದ್ದರೂ ಮಳೆ ಸುರಿಯಲಿಲ್ಲ.

ಕಲಬುರಗಿ ನಗರ, ಸೇಡಂ, ಚಿತ್ತಾಪುರ, ಯಡ್ರಾಮಿ ಮುಂತಾದ ಪ್ರದೇಶದಲ್ಲಿ ಶನಿವಾರ ಸಂಜೆ ಆರಂಭವಾದ ಮಳೆ ಭಾನುವಾರ ಬೆಳಗ್ಗೆ ತನಕ ಸುರಿದಿದೆ. ಚಿಂಚೋಳಿ ತಾಲೂಕಿನ ಕುಂಚಾವರಂನ ಸುತ್ತಮುತ್ತ 50 ಮಿ. ಮೀ. ಮಳೆಯಾಗಿದೆ. ಬೀದರ್‌ನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದ್ದು, ಚಿಟಗುಪ್ಪ ತಾಲೂಕಿನಲ್ಲಿ ಹೊಲಗಳಿಗೆ ನೀರು ನುಗ್ಗಿತ್ತು. ಕರ್ನಾಟಕದ ವಿವಿಧ ಜಲಾಶಯಗಳ ಸೋಮವಾರದ ನೀರಿನ ಮಟ್ಟದ ವಿವಿರ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಸೋಮವಾರ ಜಲಾಶಯದಲ್ಲಿ 553.43 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 2501 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 6097 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಸೋಮವಾರದ ಡ್ಯಾಂನಲ್ಲಿ 871.02 ಮೀಟರ್ ನೀರಿನ ಸಂಗ್ರಹವಿದೆ. 470 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1450 ಕ್ಯುಸೆಕ್

ಹೇಮಾವತಿ ಜಲಾಶಯದ ಸೋಮವಾರದ ನೀರಿನ ಮಟ್ಟ 888.30 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 1959 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5225 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಸೋಮವಾರ 695.36 ಮೀಟರ್ ನೀರಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 1257 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4700 ಕ್ಯುಸೆಕ್.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಸೋಮವಾರ ಜಲಾಶಯದಲ್ಲಿ 34.58 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 4681 ಕ್ಯುಸೆಕ್. ಹೊರ ಹರಿವು 7801 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಸೋಮವಾರ 657.44 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 2456 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ಸೋಮವಾರ 497.67 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 9555 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊಸ ಹರಿವು 10891 ಕ್ಯುಸೆಕ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 12015 ಕ್ಯುಸೆಕ್ ಒಳಹರಿವು ಇದೆ.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 492.20 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 10865 ಕ್ಯುಸೆಕ್ ಆಗಿದೆ. ಹೊರ ಹರಿವು 10865 ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದಲ್ಲಿ ಸೋಮವಾರ 556.83 ಮೀಟರ್ ನೀರಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1235 ಕ್ಯುಸೆಕ್ ಒಳಹರಿವುಇದೆ. 5242 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಸೋಮವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 828 ಕ್ಯುಸೆಕ್.

ಮಲಪ್ರಭಾ ಜಲಾಶಯದ ಸೋಮವಾರದ ನೀರಿನ ಮಟ್ಟ 633.71 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+