ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ; ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 28: ಗುಲಾಬ್ ಚಂಡಮಾರುತ ಕರ್ನಾಟಕದ ಮೇಲೆ ಹೆಚ್ಚಿನ ಪ್ರಭಾವ ಬೀರಿಲ್ಲ. ಆದರೆ ಶಾಹೀನ್ ಚಂಡಮಾರುತ ಕರ್ನಾಟಕದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ ಶಾಹೀನ್ ಚಂಡಮಾರುತ ಕರ್ನಾಟಕದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದೆ. ಚಂಡಮಾರುತ ಅರಬ್ಬಿ ಸಮಯದ್ರತ್ತ ತೆರಳಿದ್ದು, ಅರಬ್ಬಿ ಸಮುದ್ರಕ್ಕೆ ಇದು ಅಪ್ಪಳಿಸಲಿದ್ದು, ಸೆಪ್ಟೆಂಬರ್ 30ರ ತನಕ ರಾಜ್ಯದಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ.

ಶಾಹೀನ್ ಚಂಡಮಾರುತದ ಪರಿಣಾಮ ಗುಜರಾತ್, ಮಹಾರಾಷ್ಟ್ರ, ಗೋವಾ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಮರಾಠವಾಡ, ಮಧ್ಯ ಪ್ರದೇಶ, ಜಾರ್ಖಂಡ್, ಆಂಧ್ರ ಪ್ರದೇಶ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಹ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಗುಲಾಬ್ ಚಂಡಮಾರುತ ಈಗಾಗಲೇ ದುರ್ಬಲವಾಗಿದೆ. ಈ ಚಂಡಮಾರುತದ ಪರಿಣಾಮ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸ್‌ಗಢ್, ಗುಜರಾತ್ ರಾಜ್ಯಗಳಲ್ಲಿ ಮಳೆಯಾಗಿದೆ. ಶಾಹೀನ್ ಚಂಡಮಾರುತದಿಂದಾಗಿ ಇನ್ನು ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಮಂಗಳವಾರ ಜಲಾಶಯದಲ್ಲಿ 553.41 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 3703 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 6061 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಮಂಗಳವಾರ ಜಲಾಶಯದಲ್ಲಿ 870.98 ಮೀಟರ್ ನೀರಿನ ಸಂಗ್ರಹವಿದೆ. 940 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1450 ಕ್ಯುಸೆಕ್ ಆಗಿದೆ.

ಹೇಮಾವತಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 888.22 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 2969 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5250 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಮಂಗಳವಾರ 695.21 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 1464 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4700 ಕ್ಯುಸೆಕ್.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಇನ್ನೂ ಭರ್ತಿಯಾಗಿಲ್ಲ. ಮಂಗಳವಾರ ಜಲಾಶಯದಲ್ಲಿ 34.50 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 4645 ಕ್ಯುಸೆಕ್. ಹೊರ ಹರಿವು 7765 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಮಂಗಳವಾರ 657.41 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 2167 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ವಿಜಯನಗರ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಮಂಗಳವಾರ ಡ್ಯಾಂನಲ್ಲಿ 497.65 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 8931 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊಸ ಹರಿವು 10712 ಕ್ಯುಸೆಕ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.56 ಮೀಟರ್ ಆಗಿದೆ. ಜಲಾಶಯಕ್ಕೆ 16512 ಕ್ಯುಸೆಕ್ ಒಳಹರಿವು ಇದೆ. ಹೊಸ ಹರಿವು 18549 ಕ್ಯುಸೆಕ್ ದಾಖಲಾಗಿದೆ.

ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 492.15 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 17185 ಕ್ಯುಸೆಕ್ ಆಗಿದೆ. ಹೊರ ಹರಿವು 19919 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದಲ್ಲಿ ಮಂಗಳವಾರ 556.73 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 1766 ಕ್ಯುಸೆಕ್ ಒಳಹರಿವು ಇದೆ. 5322 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 500 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಮಂಗಳವಾರ 633.65 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳ ಹರಿವು 1694 ಕ್ಯುಸೆಕ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+