ಕರ್ನಾಟಕದ ವಿವಿಧ ಜಿಲ್ಲೆಯಲ್ಲಿ ಮಳೆ; ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 29: ಶಾಹೀನ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕೋಲಾರ, ಬೆಂಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಅಕ್ಟೋಬರ್ 1ರ ಬಳಿಕ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಒಂದು ವಾರ ಸುರಿಯುವ ಸಾಧ್ಯತೆ ಇದೆ. ಅಕ್ಟೋಬರ್ 4ರಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಒಂದೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಾಗಿಲ್ಲ.

ಭೀಮಾ ನದಿ ಪಾತ್ರದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಆದ್ದರಿಂದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್‌ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬ್ಯಾರೇಜ್‌ನಿಂದ 1.5 ಲಕ್ಷ‌ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಅಧಿಕ ನೀರು ನದಿಯಲ್ಲಿ ಹರಿಯುತ್ತಿರುವ ಕಾರಣ ನದಿ ಪಾತ್ರದ ದೇವಾಲಯಗಳು ಜಲಾವೃತವಾಗಿವೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಬುಧವಾರ ಲಿಂಗನಮಕ್ಕಿ ಜಲಾಶಯದಲ್ಲಿ 553.44 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಜಲಾಶಯಕ್ಕೆ 8935 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 5031 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಜಲಾಶಯದಲ್ಲಿ 870.96 ಮೀಟರ್ ನೀರಿನ ಸಂಗ್ರಹವಿದೆ. 1053 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1250 ಕ್ಯುಸೆಕ್.

ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 888.19 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 4046 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 4960 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಬುಧವಾರ 695.12 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2690 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4700 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಬುಧವಾರ ಡ್ಯಾಂನಲ್ಲಿ 34.42 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 4385 ಕ್ಯುಸೆಕ್. ಹೊರ ಹರಿವು 7736 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಬುಧವಾರ 657.39 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 2451 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ವಿಜಯನಗರದ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಬುಧವಾರ ಡ್ಯಾಂನಲ್ಲಿ 497.63 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 7429 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೊರ ಹರಿವು 10991 ಕ್ಯುಸೆಕ್ ದಾಖಲಾಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 519.56 ಮೀಟರ್ ಆಗಿದೆ. ಜಲಾಶಯಕ್ಕೆ 17800 ಕ್ಯುಸೆಕ್ ಒಳಹರಿವು ಇದೆ.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 492.17 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 18347 ಕ್ಯುಸೆಕ್ ಆಗಿದೆ. ಹೊರ ಹರಿವು 17255 ಕ್ಯುಸೆಕ್ ದಾಖಲಾಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದಲ್ಲಿ ಬುಧವಾರ 556.75 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 3271 ಕ್ಯುಸೆಕ್ ಒಳಹರಿವು ಇದೆ. 3271 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 489 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಬುಧವಾರ 633.62 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+