ಇನ್ನೂ ಎರಡು ದಿನ ಮಳೆ; ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 07; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 8ರ ತನಕ ಮಳೆಯಾಗಲಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಭಾಗಮಂಡಲ ಸುತ್ತಮುತ್ತಲ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಕೊಡಗಿನ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆ ಎಂದು ಮುನ್ಸೂಚನೆ ನೀಡಲಾಗಿದೆ.

ಗೋವಾದಿಂದ ಮುಂಬೈ ತನಕದ ಕರಾವಳಿ ಭಾಗಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಮಳೆ ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗುವ ಮುನ್ಸೂಚನೆ ಇದ್ದು, ಬಳಿಕ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಮಂಗಳವಾರ ಜಲಾಶಯದಲ್ಲಿ 552.64 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 12748 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4463 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಮಂಗಳವಾರ ಡ್ಯಾಂನಲ್ಲಿ 871.47 ಮೀಟರ್ ನೀರಿನ ಸಂಗ್ರಹವಿದೆ. 4294 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 3553 ಕ್ಯುಸೆಕ್

ಹೇಮಾವತಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 888.47 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 3443 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5247 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 694.82 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 4567 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1950 ಕ್ಯುಸೆಕ್.

ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಮಂಗಳವಾರ ಜಲಾಶಯದಲ್ಲಿ 35.36 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 10223 ಕ್ಯುಸೆಕ್ ಆಗಿದೆ, ಹೊರ ಹರಿವು 10860 ಕ್ಯುಸೆಕ್

ಭದ್ರಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 657.53 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 3751 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 497.67 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 11856 ಕ್ಯುಸೆಕ್ ನೀರು ಹರಿದು ಬರುತ್ತಿದೆ, ಹೊರ ಹರಿವು 15,418 ಮೀಟರ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 5432 ಕ್ಯುಸೆಕ್ ಒಳಹರಿವು ಇದೆ.

ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 491.76 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 8829 ಕ್ಯುಸೆಕ್ ಆಗಿದೆ. ಹೊರ ಹರಿವು 4695 ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪ, ಘಟಪ್ರಭಾ, ಮಲಪ್ರಭಾ ಡ್ಯಾಂ

ಸೂಪಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 554.92 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 8856 ಕ್ಯುಸೆಕ್ ಒಳಹರಿವು . 1934 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಮಂಗಳವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 1579 ಕ್ಯುಸೆಕ್. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

ಮಲಪ್ರಭಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 633.56 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 1394 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+