ನದಿಗಳ ನೀರಿನ ಮಟ್ಟ ಏರಿಕೆ; ಡ್ಯಾಂಗಳಲ್ಲಿ ಎಷ್ಟು ನೀರಿದೆ?

ಬೆಂಗಳೂರು, ಸೆಪ್ಟೆಂಬರ್ 08; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ನದಿಗಳಲ್ಲಿ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ, ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ.

ಗುರುವಾರದ ಬೆಳಗ್ಗೆ ತನಕ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಮತ್ತು ಬೀದರ್, ಕಲಬುರಗಿ ಹಾಗೂ ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಬಿಸಿಲು ಮುಂದುವರೆಯಲಿದ್ದು, ಮೋಡ ಕವಿದ ವಾತಾವರಣವೂ ಇರಲಿದೆ.

ಸೆಪ್ಟೆಂಬರ್ 15ರ ತನಕ ಕರಾವಳಿ ಭಾಗದಲ್ಲಿ ಆಗಾಗ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಎಷ್ಟು ನೀರಿದೆ? ಎಂಬ ಮಾಹಿತಿ ಇಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್ ಆಗಿದೆ. ಬುಧವಾರ ಜಲಾಶಯದಲ್ಲಿ 552.73 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 15037 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 4433 ಕ್ಯುಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಬುಧವಾರ ಡ್ಯಾಂನಲ್ಲಿ 871.19 ಮೀಟರ್ ನೀರಿನ ಸಂಗ್ರಹವಿದೆ. 6682 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 4766 ಕ್ಯುಸೆಕ್ ಆಗಿದೆ.

ಹೇಮಾವತಿ ಜಲಾಶಯದ ಬುಧವಾರದ ನೀರಿನ ಮಟ್ಟ 888.46 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 4739 ಕ್ಯುಸೆಕ್ ನೀರು ಡ್ಯಾಂಗೆ ಹರಿದುಬರುತ್ತಿದೆ. ಹೊರ ಹರಿವು 5082 ಕ್ಯುಸೆಕ್ ಆಗಿದೆ.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.13 ಮೀಟರ್ ಆಗಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 5140 ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1950 ಕ್ಯುಸೆಕ್.

ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಬುಧವಾರದ ಜಲಾಶಯದಲ್ಲಿ 35.33 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್. ಒಳಹರಿವು 9645 ಕ್ಯುಸೆಕ್ ಆಗಿದೆ, ಹೊರ ಹರಿವು 10802 ಕ್ಯುಸೆಕ್

ಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 657.54 ಮೀಟರ್ ಆಗಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯದ ಒಳಹರಿವು 4052 ಕ್ಯುಸೆಕ್ ಆಗಿದೆ. 3751 ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 497.67 ಮೀಟರ್. ಡ್ಯಾಂನ ಪೂರ್ಣಮಟ್ಟ 497.71 ಮೀಟರ್ ಆಗಿದೆ. ಜಲಾಶಯಕ್ಕೆ 10340 ಕ್ಯುಸೆಕ್ ನೀರು ಹರಿದು ಬರುತ್ತಿದೆ, ಹೊರ ಹರಿವು 10340 ಮೀಟರ್.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 519.57 ಮೀಟರ್ ಆಗಿದೆ. ಜಲಾಶಯಕ್ಕೆ 8176 ಕ್ಯುಸೆಕ್ ಒಳಹರಿವು ಇದೆ. ಹೊಸ ಹರಿವು 8176 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.83 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 7776 ಕ್ಯುಸೆಕ್ ಆಗಿದೆ. ಹೊರ ಹರಿವು 4122 ಕ್ಯುಸೆಕ್.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 555.28 ಮೀಟರ್. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ 6990 ಕ್ಯುಸೆಕ್ ಒಳಹರಿವು ಮತ್ತು 49 ಕ್ಯುಸೆಕ್ ಹೊರ ಹರಿವು ಇದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಬುಧವಾರ ಜಲಾಶಯದಲ್ಲಿ 662.91 ಮೀಟರ್ ನೀರಿದೆ. ಜಲಾಶಯದ ಒಳಹರಿವು 1727 ಕ್ಯುಸೆಕ್. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

ಮಲಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 633.56 ಮೀಟರ್ ಆಗಿದೆ. ಪೂರ್ಣ ಮಟ್ಟ 633.80 ಮೀಟರ್ ಆಗಿದೆ. ಜಲಾಶಯದ ಒಳಹರಿವು 1394 ಕ್ಯುಸೆಕ್ ಆಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+