ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Dams Water Level Today: ಜುಲೈ 28ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಜುಲೈ 28: ಕರ್ನಾಟಕದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಗದಗ, ಬಳ್ಳಾರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದರೂ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ಮುಂದಿನ ಜುಲೈ 30ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸರಕಾರ ಟ್ರಯಲ್ ಬ್ಲಾಸ್ಟ್ ಮಾಡಿಸಿ ಗಣಿಗಾರಿಕೆಗೆ ಅನುಕೂಲ ಮಾಡಲು ಮುಂದಾಗಿದೆ: ಲಕ್ಷ್ಮಣ್ ಆರೋಪಸರಕಾರ ಟ್ರಯಲ್ ಬ್ಲಾಸ್ಟ್ ಮಾಡಿಸಿ ಗಣಿಗಾರಿಕೆಗೆ ಅನುಕೂಲ ಮಾಡಲು ಮುಂದಾಗಿದೆ: ಲಕ್ಷ್ಮಣ್ ಆರೋಪ

ಕೊಪ್ಪಳ, ತುಮಕೂರು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಹೊಸಪೇಟೆ, ಅರಸೀಕೆರೆ, ಮೈಸೂರು, ಕೋಲಾರ, ಗದಗ, ಬೆಳಗಾವಿ, ರಾಮಗಿರಿ, ಚಿಕ್ಕಬಳ್ಳಾಪುರ, ವಿಜಯಪುರ, ಕೊಡಗು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕರ್ನಾಟಕದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.11 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.77ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.03ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.01 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.14ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.66 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.42 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.81 ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.81ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 657.12ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 630.63ರಷ್ಟು ನೀರು ಸಂಗ್ರಹವಾಗಿದೆ.

English summary
Karnataka's Weather report and major Dams Water Level Today July 28th: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X