
Infographics: ಜುಲೈ 29ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 29: ಕರ್ನಾಟಕದ ಕರಾವಳಿಯಲ್ಲಿ ದುರ್ಬಲವಾಗಿದ್ದು, ಒಳನಾಡು ಮತ್ತು ಕರಾವಳಿ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಜುಲೈ 31ರವರೆಗೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಎಲ್ಲಾ ಜಿಲ್ಲೆಗಳ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಒಂದರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ, ನದಿಪಾತ್ರದ ಜನರಿಗೆ ಪ್ರವಾಹದ ಭೀತಿ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರೆಡು ಸಲ ಸಾಧಾರಣ ಮಳೆಯಾಗಿದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇದೆ. ಇದರ ಮಧ್ಯೆ ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.13 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.88ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.00ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.02 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.10ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.51 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.47 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.82 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.78ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 657.26ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 630.66ರಷ್ಟು ನೀರು ಸಂಗ್ರಹವಾಗಿದೆ.