ಮಳೆ ಮುನ್ಸೂಚನೆ ನಡುವೆ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ ತಿಳಿಯಿರಿ

ಮುಂಗಾರು ಮಳೆ ಅಬ್ಬರಕ್ಕೆ ತತ್ತರಿಸಿದ್ದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಮಳೆ ಆರ್ಭಟ ಶುರುವಾಗಲಿದ್ದು, ಆಗಸ್ಟ್ 18ರ ತನಕ ಭಾರಿ ಗಾಳಿ ಮಳೆ ಮುಂದುವರೆದಿದೆ ಜೊತೆಗೆ ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆಯಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶನಿವಾರ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯ ಕರಿಕೆ ಎಂಬಲ್ಲಿ ಅತ್ಯಧಿಕ 75 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ನಿನ್ನೆ ಬಳ್ಳಾರಿಯ ಸಂಡೂರಿನ ನಿಡುಗುರ್ತಿಯಲ್ಲಿ 57 ಮಿ.ಮೀ ಮಳೆ ದಾಖಲಾಗಿತ್ತು.

ಶರಾವತಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಯಾವುದೇ ಸಂದರ್ಭದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ಆದ್ದರಿಂದ ಜನರು ಜಾನುವಾರುಗಳ ಜೊತೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 14) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಬೆಂಗಳೂರಿನ ಎಲ್ಲೆಡೆ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ತಾಪಮಾನ ಸರಾಸರಿ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.

ಮಳೆ ತತ್ತರಿಸಿದ್ದ ಉತ್ತರ ಕರ್ನಾಟಕ

ಮಳೆ ತತ್ತರಿಸಿದ್ದ ಉತ್ತರ ಕರ್ನಾಟಕ

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಲಿಂಗನಮಕ್ಕಿ ಜಲಾಶಯದ ಶನಿವಾರದ ನೀರಿನ ಮಟ್ಟ 552.30 ಮೀಟರ್ ಆಗಿದೆ. ಡ್ಯಾಂ ಗರಿಷ್ಠ ಮಟ್ಟ 554.44 ಮೀಟರ್(ಸಮುದ್ರ ಮಟ್ಟದಿಂದ). ಜಲಾಶಯಕ್ಕೆ ಒಳಹರಿವು 6,319 ಕ್ಯೂಸೆಕ್. ಹೊರ ಹರಿವು 6,175 ಕ್ಯೂಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 870.52 ಮೀಟರ್. ಡ್ಯಾಂಗೆ 3725 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 1966 ಕ್ಯೂಸೆಕ್ ದಾಖಲಾಗಿದೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 890.04 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 3195 ಕ್ಯೂಸೆಕ್, ಶನಿವಾರದ ಹೊರ ಹರಿವು 4255 ಕ್ಯುಸೆಕ್.

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕಬಿನಿ ಜಲಾಶಯದ ಶನಿವಾರದ ನೀರಿನ ಮಟ್ಟ 695.71ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. 3656 ಕ್ಯುಸೆಕ್ ಒಳಹರಿವು ಇದ್ದು, 2450 ಹೊರಹರಿವು ಕ್ಯುಸೆಕ್ ದಾಖಲಾಗಿದೆ.

ಮಂಡ್ಯದ ಕೆಆರ್‌ಎಸ್ ಜಲಾಶಯದ ಶನಿವಾರದ ನೀರಿನ ಮಟ್ಟ 36.81 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಡ್ಯಾಂಗೆ ಒಳಹರಿವು 3896 ಕ್ಯುಸೆಕ್ ಆಗಿದ್ದು, ಹೊರ ಹರಿವು 5482 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಶನಿವಾರದ ನೀರಿನ ಮಟ್ಟ 657.35 ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಡ್ಯಾಂ ಒಳಹರಿವು 5239 ಕ್ಯುಸೆಕ್ ಹಾಗೂ 4336 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ ಜಲಾಶಯದ ಶನಿವಾರದ ನೀರಿನ ಮಟ್ಟ 497.71 ಮೀಟರ್ ಇದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 29,174 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 18,487 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಶನಿವಾರದ ನೀರಿನ ಮಟ್ಟ 519.51ಮೀಟರ್. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. 20,330 ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 2507 ಕ್ಯುಸೆಕ್.

ನಾರಾಯಣಪುರ ಜಲಾಶಯದ ಶನಿವಾರದ ನೀರಿನ ಮಟ್ಟ 491.24ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 196 ಕ್ಯುಸೆಕ್, ಹೊರ ಹರಿವು 8953ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಸೂಪಾ ಜಲಾಶಯದ ಶನಿವಾರದ ನೀರಿನ ಮಟ್ಟ 554.53 ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 5117 ಕ್ಯುಸೆಕ್ ಇದ್ದು, ಹೊರ ಹರಿವು 4688 ಕ್ಯುಸೆಕ್.

ಘಟಪ್ರಭಾ ಜಲಾಯಶದ ಶನಿವಾರದ ನೀರಿನ ಮಟ್ಟ 662.79 ಮೀಟರ್. ಡ್ಯಾಂ ಪೂರ್ಣ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 7644 ಕ್ಯುಸೆಕ್. ಹೊರ ಹರಿವು 3776 ಕ್ಯುಸೆಕ್.

ಮಲಪ್ರಭಾ ಜಲಾಶಯದ ಇಂದಿನ ನೀರಿನ ಮಟ್ಟ 633.10 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ 4582 ಕ್ಯುಸೆಕ್ ಒಳಹರಿವು, 869 ಕ್ಯುಸೆಕ್ ಹೊರಹರಿವು ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+