ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆ

|
Google Oneindia Kannada News

ಮುಂಗಾರು ಮಳೆ ಅಬ್ಬರಕ್ಕೆ ತತ್ತರಿಸಿದ್ದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಸುರಿಯಲು ಆರಂಭಿಸಿದೆ. ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿವೆ. ರಾಜ್ಯದ ಬಹುತೇಕ ಎಲ್ಲೆಡೆ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಪ್ರಮುಖ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮಳೆ ಮತ್ತೆ ಶುರುವಾಗಿದೆ. ಇದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣ ಕಡಿಮೆ ಇದೆ. ಜುಲೈನಲ್ಲಿ ಭಾರೀ ಮಳೆಯಿಂದಾಗಿ ಗಣನೀಯ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬಂದಿತ್ತು. ನಂತರ ಮಳೆ ಪ್ರಮಾಣ ತಗ್ಗಿದರೂ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದವು.

 ಆಗಸ್ಟ್ 28 ರಿಂದ 2 ದಿನ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಆಗಸ್ಟ್ 28 ರಿಂದ 2 ದಿನ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಕಲ್ಲಿನಾಯಕನಹಳ್ಳಿ ಎಂಬಲ್ಲಿ ಅತ್ಯಧಿಕ 173.5 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ನಿನ್ನೆ ತುಮಕೂರಿನ ತಿಪಟೂರಿನ ಕರಡಿಯಲ್ಲಿ 138 ಮಿ.ಮೀ ಮಳೆ ದಾಖಲಾಗಿತ್ತು.

ಶರಾವತಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಯಾವುದೇ ಸಂದರ್ಭದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ಆಗಸ್ಟ್ 25) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

 ದಕ್ಷಿಣ ಮಾರುತ ಪ್ರಭಾವ; ಆಗಸ್ಟ್‌ 27ರವರೆಗೂ ಈ ರಾಜ್ಯಗಳಲ್ಲಿ ಮಳೆ ಸೂಚನೆ ದಕ್ಷಿಣ ಮಾರುತ ಪ್ರಭಾವ; ಆಗಸ್ಟ್‌ 27ರವರೆಗೂ ಈ ರಾಜ್ಯಗಳಲ್ಲಿ ಮಳೆ ಸೂಚನೆ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ.ಆ.25 ಮತ್ತು 26ರಂದು ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಬಹುತೇಕ 28-29 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಲಿಂಗನಮಕ್ಕಿ ಜಲಾಶಯದ ಬುಧವಾರದ ನೀರಿನ ಮಟ್ಟ 552.47ಮೀಟರ್ ಆಗಿದೆ. ಡ್ಯಾಂ ಗರಿಷ್ಠ ಮಟ್ಟ 554.44 ಮೀಟರ್(ಸಮುದ್ರ ಮಟ್ಟದಿಂದ). ಜಲಾಶಯಕ್ಕೆ ಒಳಹರಿವು 5,444ಕ್ಯೂಸೆಕ್. ಹೊರ ಹರಿವು 5,268 ಕ್ಯೂಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 871.03 ಮೀಟರ್. ಡ್ಯಾಂಗೆ 1668 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 1750 ಕ್ಯೂಸೆಕ್ ದಾಖಲಾಗಿದೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 889.51 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 1866 ಕ್ಯೂಸೆಕ್, ಮಂಗಳವಾರದ ಹೊರ ಹರಿವು 4920 ಕ್ಯುಸೆಕ್.

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.81 ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. 3592 ಕ್ಯುಸೆಕ್ ಒಳಹರಿವು ಇದ್ದು, 5417 ಹೊರಹರಿವು ಕ್ಯುಸೆಕ್ ದಾಖಲಾಗಿದೆ.

ಮಂಡ್ಯದ ಕೆಆರ್‌ಎಸ್ ಜಲಾಶಯದ ಬುಧವಾರದ ನೀರಿನ ಮಟ್ಟ 36.56 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಡ್ಯಾಂಗೆ ಒಳಹರಿವು 3957 ಕ್ಯುಸೆಕ್ ಆಗಿದ್ದು, ಹೊರ ಹರಿವು 7020 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 657.46 ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಡ್ಯಾಂ ಒಳಹರಿವು 4085 ಕ್ಯುಸೆಕ್ ಹಾಗೂ 3483 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 497.64ಮೀಟರ್ ಇದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 11143 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 14,705 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಬುಧವಾರದ ನೀರಿನ ಮಟ್ಟ 519.57 ಮೀಟರ್. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. 12, 344ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 12, 344ಕ್ಯುಸೆಕ್.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.12 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 11162 ಕ್ಯುಸೆಕ್, ಹೊರ ಹರಿವು 9534 ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 554.80 ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 3383 ಕ್ಯುಸೆಕ್ ಇದ್ದು, ಹೊರ ಹರಿವು 1661 ಕ್ಯುಸೆಕ್.

ಘಟಪ್ರಭಾ ಜಲಾಯಶದ ಬುಧವಾರದ ನೀರಿನ ಮಟ್ಟ 662.91 ಮೀಟರ್. ಡ್ಯಾಂ ಪೂರ್ಣ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 2463ಕ್ಯುಸೆಕ್. ಹೊರ ಹರಿವು 2463 ಕ್ಯುಸೆಕ್.

ಮಲಪ್ರಭಾ ಜಲಾಶಯದ ಇಂದಿನ ನೀರಿನ ಮಟ್ಟ 633.40 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ 2080ಕ್ಯುಸೆಕ್ ಒಳಹರಿವು, 494ಕ್ಯುಸೆಕ್ ಹೊರಹರಿವು ಇದೆ.

English summary
Karnataka's Weather report and major Dams Water Level Today August 25: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X