ಆಗಸ್ಟ್ 27 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಆಗಸ್ಟ್ 27: ರಾಜ್ಯದ ಕೆಲವೆಡೆ ಮಳೆ ಕೊಂಚ ಬಿಡುವು ಪಡೆದಿದ್ದು, ಆಗಸ್ಟ್ 28ರಿಂದ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಜಲಾಶಯಗಳು ಭರ್ತಿಯಾಗಿವೆ.
ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.
ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ.
ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ.
ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.
ಇಂದು ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 550.66ಮೀಟರ್ ಇದ್ದು, ಇಂದು552.45ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.90ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.34 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.47ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ36.28ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.43ರಷ್ಟಿದ್ದು, ಇಂದಿನ ಮಟ್ಟ 657.45ಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು497.53ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು519.57ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.91ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ551.54ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 554.71 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 633.43ನೀ ಸಂಗ್ರಹವಾಗಿದೆ












Click it and Unblock the Notifications