ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Dams Water Level Today : ಆಗಸ್ಟ್ 2ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 02: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಆಗಸ್ಟ್ 3ರವರೆಗೂ ವರುಣನ ಅಬ್ಬರ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಗದಗ ಮತ್ತು ಕೋಲಾರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆೆಯಾಗಿದೆ. ಉಳಿದಂತೆ ಹುಬ್ಬಳ್ಳಿ, ಧಾರವಾಡ, ಬೀದರ್, ದಾವಣಗೆೆರೆ, ಹಿರಿಯೂರು, ಅರಸೀಕೆರೆ, ಮೈಸೂರು, ಹಾಸನ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆೆಯಾಗಿದೆ.

ಕರಾವಳಿ ತೀರದಲ್ಲಿ ಬಿರುಗಾಳಿ ವೇಗ ಹೆಚ್ಚಾಗಿದ್ದು, 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರೆಡು ಸಲ ಸಾಧಾರಣ ಮಳೆಯಾಗಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದೆ.

ಕರ್ನಾಟಕ; ವಾಡಿಕೆಗಿಂತ ಶೇ.14ರಷ್ಟು ಹೆಚ್ಚು ಮಳೆಕರ್ನಾಟಕ; ವಾಡಿಕೆಗಿಂತ ಶೇ.14ರಷ್ಟು ಹೆಚ್ಚು ಮಳೆ

ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕರ್ನಾಟಕದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.48 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.12ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.99ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.18ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.54 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.64 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.97 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.94ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 657.86ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 630.81ರಷ್ಟು ನೀರು ಸಂಗ್ರಹವಾಗಿದೆ.

English summary
Karnataka's Weather report and major Dams Water Level Today August 2nd: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X