ಆಗಸ್ಟ್ 07ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಆಗಸ್ಟ್ 07: ರಾಜ್ಯದೆಲ್ಲೆಡೆ ಸಾಧಾರಣ ಮಳೆಯಾಗುತ್ತಿದೆ, ಜಲಾಶಯಗಳಿಗೆ ಒಳಹರಿವಿನ ಪ್ರಮಾಣವೂ ಕೂಡ ಹೆಚ್ಚಿದೆ. ಮುಂಗಾರು ಪ್ರಭಾವದಿಂದಾಗಿ ಮುಂದಿನ 5 ದಿನಗಳವರೆಗೂ ಹಲವು ರಾಜ್ಯದಾದ್ಯಂತ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದಾರೆ. ಇದೇ ವೇಳೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಗುರುವಾರ ಸಂಜೆ 5.30ರವರೆಗೆ ಬೆಂಗಳೂರಿನಲ್ಲಿ 4.6 ಎಂಎಂ ನಷ್ಟು ಮಳೆಯಾಗಿದ್ದು, ಹೆಚ್ಎಎಲ್ ನಲ್ಲಿ 0.9 ಎಂಎಂ ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ.

ಕರಾವಳಿಯಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಈಗಾಗಲೇ ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿನ್ನೆ ಪ್ರಕಟಿಸಿರುವ ಮಳೆ ಮುನ್ಸೂಚನೆ ಮಾಹಿತಿ ಪ್ರಕಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಆಗಲಿದೆ.

ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕಳೆದ ತಿಂಗಳು ಸುಮಾರು 15 ದಿನಕ್ಕೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿತ್ತು. ನದಿಗಳು ಉಕ್ಕಿ ಹರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು. ನೋಡನೋಡುತ್ತಿದ್ದಂತೆಯೇ ಮನೆ ಮಠ ಸಾಕು ಪ್ರಾಣಿಗಳು ಕೊಚ್ಚಿ ಹೋಗಿದ್ದವು.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು551.74ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.20ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.93 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.60ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ35.82ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.30ರಷ್ಟಿದ್ದು, ಇಂದಿನ ಮಟ್ಟ 655.67ಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.39ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು519.09ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.00ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ553.95ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.06ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 632.86ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+