ಡಿ.3ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ತಮಿಳುನಾಡು ಕರಾವಳಿಯನ್ನು ಕಾಡುತ್ತಿರುವ ಬುರೇವಿ ಚಂಡಮಾರುತ ಪ್ರಭಾವದಿಂದ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3 ರಿಂದ 5ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ತುಮಕೂರು, ಮೈಸೂರು, ರಾಮನಗರ ಮತ್ತು ಮಂಡ್ಯದ ಭಾಗಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಬೆಳಿಗ್ಗೆಯಿಂದ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಸುರಿಯಲಿದೆ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.3) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಗಾಳಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಸುಳಿಗಾಳಿ ಬೀಸುತ್ತಿದ್ದು, ಕೆಲ ಪ್ರದೇಶಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications