ಡಿ.9ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಡಿಸೆಂಬರ್ 09: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 14ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಇನ್ನು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ. ಚಳಿಗಾಲ ಬಂದರೂ ಮಳೆಯೂ ಸಂಪೂರ್ಣ ನಿಂತಿಲ್ಲದ ಕಾರಣ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿವೆ.
ಇಂದು ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್ ವ್ಯಾಪ್ತಿಯಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ.
ಅರುಣಾಚಲ ಪ್ರದೇಶ, ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳ ವಿವಿಧಡೆ ಚದುರಿದ ಮಳೆಯಾಗುವ ಸಂಭವಗಳಿವೆ, ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವನ್ನು ಮುಂದುವರಿಯಲಿದೆ. ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಬೆಳಗಿನ ವೇಳೆ ಮಧ್ಯಮ ಮಂಜು ಇರಲಿದೆ.
ಚಂಡಮಾರುತಗಳ ಪ್ರಭಾವದಿಂದಾಗಿ ಮಳೆಯಾಗುತ್ತಿದ್ದು ಚಳಿಗಾಲ ಇಲ್ಲವೇ ಎಂಬ ಪ್ರಶ್ನೆ ಎದುರಾಗಿದೆ. ಹವಾಮಾನ ಏರುಪೇರು ಹಿನ್ನಲೆಯಲ್ಲಿ ಈ ವರ್ಷ ಚಳಿಯ ತೀವ್ರತೆ ಕಡಿಮೆ ಇರಲಿದೆ ಎಂಬ ಮಾಹಿತಿಯೂ ಇದೆ.
ಉತ್ತರ ಭಾರತದ ರಾಜ್ಯಗಳಲ್ಲಿಯೇ ಇನ್ನೂ ಚಳಿಗಾಲ ಆರಂಭವಾಗಿಲ್ಲ. ಡಿಸೆಂಬರ್ 21ರ ತನಕ ಕರ್ನಾಟಕದಲ್ಲಿ ಇದೇ ಮಾದರಿಯ ವಾತಾವರಣ ಇರಲಿದ್ದು, ಬಳಿಕ ಉಷ್ಣಾಂಶದಲ್ಲಿ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಪರಿಣಾಮ ಮಂಗಳವಾರದಿಂದಲೇ ಈಶಾನ್ಯ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ.
ಈ ನಡುವೆ ಉತ್ತರ ಭಾರತದಲ್ಲಿ ಬುಧವಾರ ಮಧ್ಯಾಹ್ನದಿಂದ ವಾತಾವರಣ ಬದಲಾಗಿದ್ದು, ಗುರುವಾರ ರಾತ್ರಿಯೊಳಗೆ ಚದುರಿತ ರೀತಿ ಹಿಮ ಬೀಳಲಿದೆ.
ಡಿಸೆಂಬರ್ 9 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಲಘು ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 552.10 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.21ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 888.02ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.05 ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.73ಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.24ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.04ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 554.39ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 660.22ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 633.15 ನೀರು ಸಂಗ್ರಹವಾಗಿದೆ.
Recommended Video
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ










Click it and Unblock the Notifications