ಡಿ.11ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಡಿಸೆಂಬರ್ 11: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಕೆಲವೆಡೆ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆಯಿದ್ದರೂ ಉಳಿದಂತೆ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಒಂದೆರಡು ಕಡೆ ಡಿಸೆಂಬರ್ 15ಕ್ಕೆ ಮಳೆಯಾಗಬಹುದು. ಉಳಿದ ದಿನಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವೆಡೆ ಈ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ . ಹಾಸನದಲ್ಲಿ 5 ಸೆಂ.ಮೀ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಬೆಂಗಳೂರು ನಗರದ ಹೆಸರಘಟ್ಟತಲಾ 3 ಸೆಂ.ಮೀ., ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಹಾಸನದ ನುಗ್ಗೆಹಳ್ಳಿ ತಲಾ 2 ಸೇಂ.ಮೀ. ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಇಂದು ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಮುಂದಿನ ಒಂದೆರಡು ದಿನ ಈಶಾನ್ಯ ಮತ್ತು ಪೂರ್ವದ ಕೆಲವು ಬಯಲು ಪ್ರದೇಶಗಳಲ್ಲಿ ಮಳೆ ಮತ್ತು ಮಂಜಿನ ಮುನ್ಸೂಚನೆ ನೀಡಲಾಗಿದೆ. ಇಂದು ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆಯಿದೆ.
ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 552.01 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.08ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 887.94ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.03 ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.73ಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.30ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.78ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 554.20ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 660.22ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 633.11ನೀರು ಸಂಗ್ರಹವಾಗಿದೆ.












Click it and Unblock the Notifications