ಡಿ.16ರಂದು ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ
ಕರ್ನಾಟಕದ ಸುಮಾರು 17 ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ 27 -28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17-18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಮುಂದುವರೆಯಲಿದ್ದು, ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ದಕ್ಷಿಣ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications