ಡಿ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಡಿಸೆಂಬರ್ 20: ರಾಜ್ಯಾದ್ಯಂತ ಮಳೆ ಕಡಿಮೆಯಾಗಿದ್ದು, ಚಳಿ ಹೆಚ್ಚಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆ ಜಾಸ್ತಿಯಾಗಿತ್ತು. ಇಂದಿನಿಂದ ಚಳಿ ಹೆಚ್ಚಾಗಲಿದ್ದು, ಮಳೆ ಕಡಿಮೆಯಾಗಲಿದೆ.
ಬೆಂಗಳೂರಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಳೆದ ಎರಡು ದಿನಗಳಿಗಿಂತ ಮಳೆಯ ಪ್ರಮಾಣ ಎಲ್ಲೆಡೆ ಕಡಿಮೆಯಾಗಿದೆ. ಇಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಇಂದು ಮಳೆಯಾಗಲಿದೆ. ರಾಜಸ್ಥಾನದಲ್ಲಿ ಇಂದು ಕನಿಷ್ಠ ತಾಪಮಾನ ದಾಖಲಾಗಲಿದ್ದು, ಭಾರೀ ಚಳಿಗಾಳಿ ಇರಲಿದೆ.
ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.
ಇಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗಲಿದೆ. ಇಂದು ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ.
ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದಿನಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು551.60 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.76ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 887.44ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.97 ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.73ಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.61 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.15ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.40ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 553.48ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 660.ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 632.94 ನೀರು ಸಂಗ್ರಹವಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications