• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ, ಅಣೆಕಟ್ಟು ನೀರಿನ ಮಟ್ಟ

|

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 24ರಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದೆ. ಮಹಾರಾಷ್ಟ್ರದಿಂದ ಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ.

ಚಾಮರಾಜನಗರ, ಹಾಸನ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 24ರಿಂದ ಎರಡು ದಿನ ಮಳೆಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 24ರಿಂದ ಎರಡು ದಿನ ಮಳೆ

ಬೆಂಗಳೂರಿನಲ್ಲಿ ಗರಿಷ್ಠ 26 -28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14-17-18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ವಾತಾವರಣ ಇರಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಮಡಿಕೇರಿಯ ಚಂಬು ಎಂಬಲ್ಲಿ ಅತ್ಯಧಿಕ 50.5 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ನಿಯಂತ್ರಣ ಕೇಂದ್ರ ವರದಿ ಮಾಡಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಡಿ.24) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ಮಳೆ ಮುನ್ಸೂಚನೆ: ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತ ಚಾಮರಾಜನಗರ ಜಿಲ್ಲೆಗಳಿಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಹವಾಮಾನ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today December 24: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X