ಜುಲೈ 8ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಮುಂಗಾರು ಮಳೆ ಅಬ್ಬರ ತಗ್ಗಿದ್ದು ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಕ್ಷೀಣವಾಗಿದೆ. ಆದರೆ, ಈ ವಾರಾಂತ್ಯದಲ್ಲಿ ಭಾರಿ ಗಾಳಿ ಮಳೆ ಮುಂದುವರೆಯಲಿದೆ. ಜೊತೆಗೆ ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯಿಂದ ನೈಋತ್ಯ ಮುಂಗಾರು ಬಲಗೊಳ್ಳಲಿದ್ದು, ಕರಾವಳಿ ರಾಜ್ಯಗಳು ಹೆಚ್ಚಿನ ಮಳೆ ನಿರೀಕ್ಷಿಸಬಹುದು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭರ್ಜರಿ ಮಳೆಯಾದರೆ ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಮಟ್ಟ ಕ್ರಮೇಣ ಏರಿಕೆ ಕಾಣಬಹುದಾಗಿದೆ.

ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯ ಕಿರುಗಾವಲು ಎಂಬಲ್ಲಿ ಅತ್ಯಧಿಕ 146 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಜುಲೈ 08) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ
ಜುಲೈ 9 ರಿಂದ ಕೊಂಕಣ ಮತ್ತು ಗೋವಾ, ಕರ್ನಾಟಕದ ಕರಾವಳಿ ಮತ್ತು ಕೇರಳ ಮತ್ತು ಮಾಹೇಯಲ್ಲಿ ಪ್ರತ್ಯೇಕವಾಗಿ ಹಗುರವಾಗಿ ಮತ್ತು ಭಾರೀ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆಯ (ಐಎಂಡಿ) ಹವಾಮಾನ ಮುನ್ಸೂಚನೆಯ ವರದಿ ನೀಡಿದೆ. ಕೇರಳ ಪ್ರವೇಶದ ನಂತರ ಮುಂಗಾರು ಜೂನ್ 6ರಂದು ಕರ್ನಾಟಕ ರಾಜ್ಯ ಪ್ರವೇಶಿಸಿತ್ತು. ಆದರೆ ಜೂನ್ ಎರಡನೇ ವಾರದಲ್ಲೇ ಮಳೆ ಕ್ಷೀಣಿಸಿ ಜೂನ್ 19ರಿಂದ ಮಳೆ ನಿಂತಿತ್ತು. ಇದೀಗ ಹಲವು ದಿನಗಳ ನಂತರ ಮುಂಗಾರು ಮತ್ತೆ ಆರಂಭವಾಗಲಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+