Karnataka Dams Water Level: ಜುಲೈ 11ರಂದು ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

ಬೆಂಗಳೂರು, ಜುಲೈ 11: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.

ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕಾಗಿದ್ದು, ಜುಲೈ 13ರವರೆಗೂ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ರಾಜ್ಯ ಹವಮಾನ ಇಲಾಖೆಯು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕರಾವಳಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮತ್ತು ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಒಂದೆರೆಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ ಮಳೆಯೋ ಮಳೆ: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿಲೋ ಮೀಟರ್ ಇರಲಿದ್ದು, 65 ಕಿ. ಮೀ. ವೇಗಕ್ಕೆ ತಲುಪುವ ಸಾಧ್ಯೆತೆಯೂ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 542.49 ಮೀಟರ್ ಇದೆ. ಹಾರಂಗಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.78ರಷ್ಟಿದೆ. ಇನ್ನು ಹೇಮಾವತಿ ಪೂರ್ಣ ಮಟ್ಟ 890.58 ಮೀಟರ್ ಇದ್ದು, ಇಂದು 889.69 ಮೀಟರ್‌ ನಷ್ಟು ನೀರಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.74ರಷ್ಟು ನೀರಿದೆ. ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 37.37 ಮೀಟರ್‌. ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 654.22.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 496.33 ಮೀಟರ್‌ನಷ್ಟು ನೀರಿದೆ. ಆಲಮಟ್ಟಿಯ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 516.92 ಮೀಟರ್‌ ನಷ್ಟು ನೀರಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.12 ಮೀಟರ್‌ ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 530.70ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 644.94ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 627.13ರಷ್ಟು ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+