ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Dams Water Level: ಜುಲೈ 12ರಂದು ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಜುಲೈ 12: ಕರ್ನಾಟಕದಾದ್ಯಂತ ನೈಋತ್ಯ ಮುಂಗಾರು ಚುರುಕಾಗಿದ್ದು, ಜುಲೈ 14ರ ಬೆಳಗ್ಗೆವರೆಗೂ ವರುಣನ ಅಬ್ಬರ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ ಮಳೆಯೋ ಮಳೆ: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಮಳೆಯ ಪ್ರಮಾಣ: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿಲೋ ಮೀಟರ್ ಇರಲಿದ್ದು, 60 ಕಿ. ಮೀ. ವೇಗಕ್ಕೆ ತಲುಪುವ ಸಾಧ್ಯತೆಯೂ ಇದೆ.

ಜುಲೈ 15 ರಿಂದ ವಿವಿ ಸಾಗರಕ್ಕೆ ಭದ್ರಾ ಜಲಾಶಯದಿಂದ ನೀರು, ರೈತರಲ್ಲಿ ಸಂತಸಜುಲೈ 15 ರಿಂದ ವಿವಿ ಸಾಗರಕ್ಕೆ ಭದ್ರಾ ಜಲಾಶಯದಿಂದ ನೀರು, ರೈತರಲ್ಲಿ ಸಂತಸ

ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ? ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 543.28 ಮೀಟರ್ ನೀರಿದೆ. ಹಾರಂಗಿಯ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.73ರಷ್ಟಿದೆ. ಇನ್ನು ಹೇಮಾವತಿಯ ಪೂರ್ಣ ಮಟ್ಟ 890.58 ಮೀಟರ್ ಇದ್ದು, ಇಂದು 890.12 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.68ರಷ್ಟಿದೆ. ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 37.35 ಮೀಟರ್‌ನಷ್ಟಿದೆ. ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 654.25ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 496.90 ಮೀಟರ್‌ನಷ್ಟು ನೀರಿದೆ. ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.25 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.31 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 532.30ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 646.31ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 627.49ರಷ್ಟು ನೀರು ಸಂಗ್ರಹವಾಗಿದೆ.

English summary
Karnataka's Weather report and major Dams Water Level Today July 12th: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X