Karnataka Dams Water Level: ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು ಜು.15: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರವು ಸಾಧಾರಣದಿಂದ ಭಾರಿ ಮಳೆ ದಾಖಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಅತಿ ಭಾರೀ ಮಳೆಯಾಗಿದೆ.
ಕರಾಳಿಯ ಮೂರು ಜಿಲ್ಲೆಗಳಲ್ಲೂ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ ಬಿದ್ದಿದೆ. ಮುಂದಿನ ಜುಲೈ 20ರವರೆಗೂ ರಾಜ್ಯದಲ್ಲಿ ವಿವಿಧೆಡೆ ಮಳೆ ಮುಂದುವರಿಯುವುದಾಗಿ ರಾಜ್ಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ತೀವ್ರವಾಗಿದ್ದು, ಈ ಭಾಗದಲ್ಲಿ ಸದ್ಯಕ್ಕೆ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳು ಕಂಡು ಬಂದಿಲ್ಲ. ಇನ್ನು ಉತ್ತರ ಒಳನಾಡಿನ ಭಾಗದಲ್ಲಿ ಮಳೆ ತೀವ್ರತೆ ಸದ್ಯಕ್ಕೆ ಕಡಿಮೆ ಆಗಿದೆ.
ಈ ಹಿನ್ನೆಲೆ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ, ಭಾರೀ ಕೆಲವು ಕಡೆಗಳಲ್ಲಿ ಅತೀ ಭಾರೀ ಮಳೆ ನಿರೀಕ್ಷೆ ಇದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಶುಕ್ರವಾರ ಆಗಾಗ ಬಿಸಿಲಿನ ದರ್ಶನವೂ ಆಗಿದೆ. ಕೆಲವು ಕಡೆಗಳಲ್ಲಿ ತುಂತುರು ಮಳೆ ಬಿದ್ದ ಬಗ್ಗೆ ವರದಿಯಾಗಿದೆ. ಇದೇ ರೀತಿಯ ವಾತಾವರಣ ನಗರದಲ್ಲಿ ಮುಂದಿನ 48ಗಂಟೆಯು ಇರಲಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇನ್ನು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.
ಕರಾವಳಿಯ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 40-50 ಕಿಲೋ ಮೀಟರ್ ಇದ್ದು, ಅದು 60ಕಿ.ಮೀ.ವರೆಗೂ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದರ ಸಮಗ್ರ ವರದಿ ನಿಮ್ಮ ಮುಂದಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಶುಕ್ರವಾರ 545.47 ಮೀಟರ್ ನೀರಿದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.80ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು, ಇಂದು 890.09ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ನೀರಿನ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.54ರಷ್ಟಿದೆ, ಕೆಆರ್‌ನಲ್ಲಿ 38.04 ಸಾಮರ್ಥ್ಯವಿದ್ದು, ಇಂದು ನೀರಿನ ಮಟ್ಟ 37.61 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.16ರಷ್ಟಿದೆ.

ತುಂಗಭದ್ರಾ ಜಲಾಶಯ ವರದಿ
ತುಂಗಭದ್ರಾದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 496.92 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.22 ಮೀಟರ್‌ನಷ್ಟಿದೆ. ಅದೇ ರೀತಿ ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.20 ಮೀಟರ್‌ನಷ್ಟು ನೀರಿದೆ ಎಂದು ಮೂಲಗಳು ತಿಳಿಸಿವೆ.

ಸೂಪಾ ಜಲಾಶಯದ ವಿವರ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 536.20ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 649.86ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 628.62ರಷ್ಟು ನೀರು ಸಂಗ್ರಹವಾಗಿದೆ.












Click it and Unblock the Notifications