ಜುಲೈ 17ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ, ಜಲಾಶಯಗಳಲ್ಲಿನ ನೀರಿನ ಮಟ್ಟವೂ ಅಧಿಕವಾಗಿದೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೀಕೆಂಡ್​ನಲ್ಲಿ ಅಂದರೆ ಜು.17 ಮತ್ತು ಜು.18ರಂದು ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇಂದು ಮತ್ತು ನಾಳೆ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲೂ ಕೂಡ ಇಂದು ನಾಳೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಭಾರೀ ಹೆಚ್ಚಳವಾಗಿದೆ.

ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಇಂದು (ಜು.17) ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ನಾಳೆ (ಜುಲೈ 18) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಉತ್ತರ ಕನ್ನಡದ ಕದ್ರಾದಲ್ಲಿ 13 ಸೆಂ.ಮೀ ಮಳೆ, ಸುಬ್ರಮಣ್ಯ 10 ಸೆಂ.ಮೀ. ಸುಳ್ಯ, ದ.ಕ. ತಲಾ 9 ಸೆ.ಮೀ. ಮಳೆ ದಾಖಲು ಆಗಿದೆ.

ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್​ನಿಂದಾಗಿ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಜುಲೈ 18ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರ, ತಮಿಳುನಾಡಿನ ನೀಲಗಿರಿಯ ಪಶ್ಚಿಮ ಘಟ್ಟ, ಗುಜರಾತ್​ನ ಕೆಲ ಪ್ರದೇಶಗಳಲ್ಲಿ ಕೂಡ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 545.70ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.49ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58ಮೀಟರ್ ಇದ್ದು ಇಂದು 884.81 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.08ಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 28.82 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 650.46ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 691.69ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.73ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.43ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.12ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 653.36ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 629.41 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+