Infographics: ಜುಲೈ 18ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 18: ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಜುಲೈ 20ರವರೆಗೂ ಮಳೆಯು ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಒಳನಾಡಿನಲ್ಲಿ ನೈಋತ್ಯ ಮುಂಗಾರು ತೀವ್ರವಾಗಿದ್ದು, ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಹ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಕರುನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ರಾಜ್ಯದಲ್ಲಿ 24 ಗಂಟೆಗಳಲ್ಲಿ ಮಳೆಯೋ ಮಳೆ: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಮಳೆಯ ಪ್ರಮಾಣ: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 44 ರಿಂದ 51 ಕಿಲೋ ಮೀಟರ್ ಇದೆ. ಈ ಹಿನ್ನೆಲೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 547.27 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.98ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.00 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.69ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 37.60 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.60ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.02 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.06 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.04 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.90ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 653.81ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 629.84ರಷ್ಟು ನೀರು ಸಂಗ್ರಹವಾಗಿದೆ.











Click it and Unblock the Notifications