Karnataka Dams Water Level Today : ಜುಲೈ 19ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬಿರಿದ ವರುಣದೇವ ಮಂಗಳವಾರ ಕೊಂಚ ವಿರಾಮ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಗೆ ಅಲ್ಪವಿರಾಮ ಬಿದ್ದಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ,
ರಾಜ್ಯ ಕರಾವಳಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 28 ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿದೆ. ಇದರ ಮಧ್ಯೆ ನಗರದ ಹಲವು ಪ್ರದೇಶದಲ್ಲಿ ಅಲ್ಪಸ್ವಲ್ಪ ಮಳೆ ಬಿದ್ದಿದೆ. ಕರಾವಳಿ, ಮಲೆನಾಡು ಹಾಗೂ ಕಾಫಿನಾಡಿನಲ್ಲಿ ಸುರಿದ ಮಳೆಯಿಂದ ರಾಜ್ಯದ ಬಹುಪಾಲು ಜಲಾಶಯಗಳು ತುಂಬಿಕೊಂಡು ಧುಮ್ಮಿಕ್ಕುತ್ತಿವೆ. ರಾಜ್ಯದ ಯಾವ ಜಲಾಶಯಗಳಲ್ಲಿ ಎಷ್ಟರ ಮಟ್ಟಿಗೆ ನೀರು ಸಂಗ್ರಹವಾಗಿದೆ?, ಯಾವ ಜಲಾಶಯದಲ್ಲಿ ಎಷ್ಟರ ಮಟ್ಟಿಗೆ ನೀರು ಸಂಗ್ರಹಿಸಿಕೊಳ್ಳುವುದಕ್ಕೆ ಸಾಧ್ಯವಿದೆ ಎಂಬುದನ್ನು ಈ ವರದಿಯಲ್ಲಿ ಓದಿ ತಿಳಿದುಕೊಳ್ಳಿ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 547.55 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.08ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.02 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.63ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 37.95 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.54ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.14 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.19 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.20 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 540.50ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 654.83ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 629.99ರಷ್ಟು ನೀರು ಸಂಗ್ರಹವಾಗಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications