Karnataka Dams Water Level Today : ಜುಲೈ 20ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 20: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ನೈಋತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಾಸನ, ಉತ್ತರ ಕನ್ನಡ, ಕೊಡುಗು, ಉಡುಪಿ, ರಾಯಚೂರು, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಜುಲೈ 22ರವರೆಗೂ ಮಳೆಯಾಗಲಿದೆ.
ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬಗ್ಗೆ ಎಚ್ಚರಿಕೆ ನೀಡಿಲ್ಲ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಯಾವುದೇ ರೀತಿ ಮುನ್ನೆಚ್ಚರಿಕೆಯನ್ನು ನೀಡಿಲ್ಲ. ಬೆಂಗಳೂರಿನಲ್ಲಿ ಮಾತ್ರ ಮೋಡ ಕವಿತ ವಾತಾವರಣ ಮುಂದುವರಿದಿದೆ. ನಗರದ ಒಂದೆರೆಡು ಕಡೆಯಲ್ಲಿ ವರುಣನ ದರ್ಶನವಾಗಿದೆ. ಇದರ ಹೊರತಾಗಿ ಇತ್ತೀಚಿಗೆ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ರಾಜ್ಯದ ಯಾವ ಜಲಾಶಯಗಳಲ್ಲಿ ಎಷ್ಟರ ಮಟ್ಟಿಗೆ ನೀರು ಸಂಗ್ರಹವಾಗಿದೆ?, ಯಾವ ಜಲಾಶಯದಲ್ಲಿ ಎಷ್ಟರ ಮಟ್ಟಿಗೆ ನೀರು ಸಂಗ್ರಹಿಸಿಕೊಳ್ಳುವುದಕ್ಕೆ ಸಾಧ್ಯವಿದೆ ಎಂಬುದನ್ನು ಈ ವರದಿಯಲ್ಲಿ ಓದಿ ತಿಳಿದುಕೊಳ್ಳಿ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 547.67 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.20ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.00 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.07ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.70ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.27 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60 ರಷ್ಟಿದ್ದರೂ ಇಂದು 517.49 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.27 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 540.80ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 655.31ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 630.11ರಷ್ಟು ನೀರು ಸಂಗ್ರಹವಾಗಿದೆ.












Click it and Unblock the Notifications