ರಾಜ್ಯಾದ್ಯಂತ ವರುಣನ ಆರ್ಭಟ: ಜು.24ರಂದು ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 24: ರಾಜ್ಯಾದ್ಯಂತ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ಹಲವು ನದಿಗಳು ಉಕ್ಕುತ್ತಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದ್ದು, ನದಿ, ಹಳ್ಳ, ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಗ್ರಾಮಗಳು ಜಲಾವೃತಗೊಂಡಿವೆ. ದೇಗುಲ, ಮನೆಗಳು ಮುಳುಗಡೆಯಾಗಿವೆ. ಹಳ್ಳಿಗಳು ದ್ವೀಪದಂತಾಗಿದ್ದು, ಜನ ಪರದಾಡುತ್ತಿದ್ದಾರೆ. ವೇದಗಂಗಾ ನದಿ ಪ್ರವಾಹಕ್ಕೆ ನಿಪ್ಪಾಣಿ ತಾಲೂಕು ಸಿಲುಕಿದೆ. ಇಲ್ಲಿನ ಕೊಡಣಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಈ ಕೊಡಣಿ ಗ್ರಾಮದಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಣೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಕಾರಣ ಕೊಯ್ನಾ, ರಾಧಾನಗರಿ, ಕಳಂಬ ಡ್ಯಾಂಗಳಿಂದ ರಾಜ್ಯಕ್ಕೆ ಹರಿದುಬರ್ತಿರುವ ನೀರಿನಿಂದ ಇಡೀ ಬೆಳಗಾವಿ ಜಿಲ್ಲೆ ಹೆಚ್ಚು ಕಡಿಮೆ ಜಲದಿಗ್ಬಂಧನದಲ್ಲಿ ಸಿಲುಕಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡು ಮತ್ತೆ ಮಹಾಪ್ರವಾಹದ ಭೀತಿ ಎದುರಾಗಿದೆ.

ಬೆಳಗಾವಿ ಜಿಲ್ಲೆ ತತ್ತರಿಸಿ ಹೋಗಿದೆ. ಬೆಳಗಾವಿ ಗಡಿಯ ಪಂಚಗಂಗಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ನದಿ ನೀರಿನ ರಭಸಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡಲಾಗಿದೆ. ಮಹಿಳೆಯರು ಮಕ್ಕಳು ಸೇರಿದಂತೆ 19 ಮಂದಿಯನ್ನು ರಕ್ಷಿಸಲಾಗಿದೆ. ಗೋವಾ - ಬೆಳಗಾವಿ ರಸ್ತೆ ಸಂಚಾರ ಸ್ಥಗಿತವಾಗಿದ್ದು, ಅಂಬೋಲಿಯಲ್ಲಿ ಗುಡ್ಡ ಕುಸಿತವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಬಾರ ಕುಸಿತದಲ್ಲಿ ಶುಕ್ರವಾರ ಇನ್ನಷ್ಟು ಏರಿಕೆಯಾಗಿದೆ. ಜತೆಗೆ ಮಹಾರಾಷ್ಟ್ರ ಹಾಗು ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದ ಮೆಲ್ಲೈ ಸುಳಿಗಾಳಿ ತೀವ್ರಗೊಂಡಿದೆ. ಇದರ ಪ್ರಭಾವದಿಂದ ರಾಜ್ಯಾದ್ಯಂತ ಜು 24 ರ ವರೆಗೆ ವ್ಯಾಪಕ ಮಳೆ ಸುರಿದರೆ, ನಂತರ ಮಳೆ ತೀವ್ರತೆ ತಾತ್ಕಾಲಿಕವಾಗಿ ಕಡಿಮೆ ಆಗಲಿದೆ. ಆಗ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 20 ಸೆಂ,ಮೀಗಿಂತ ಹೆಚ್ಚು ಮಳೆ ಬೀಳಲಿದ್ದು, ಈ ಜಿಲ್ಲೆಗಳಿಗೆ ಶನಿವಾರ ಜು.24 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ನಂತರ ಮಳೆ ತುಸು ಕಡಿಮೆಯಾಗುವ ಕಾರಣಕ್ಕೆ ಜು.25ಕ್ಕೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗು ಮಲೆನಾಡಿನ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗೆ ಜು.24ಕ್ಕೆ ಅತೀ ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಗದಗ, ಕಲಬುರಗಿ, ಹಾವೇರಿ, ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜು. 25ರ ನಂತರ ಈ ಭಾಗದಲ್ಲಿ ಮಳೆ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆ ಇದೆ.

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 549.41ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 869.97ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು888.23 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.03ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ32.23 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 654.37ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 495.16ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 516.76 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.83ಮೀಟರ್‌ನಷ್ಟು ನೀರಿದೆ.

Recommended Video

    ಜೋಗ ಜಲಪಾತವನ್ನು ಈ ಸಮಯದಲ್ಲಿ ನೋಡಲು ಎರಡು ಕಣ್ಣು ಸಾಲದು | Oneindia Kannada
     ಸೂಪಾ ಜಲಾಶಯ

    ಸೂಪಾ ಜಲಾಶಯ

    ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ548.75ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 660.53ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 632.06ನೀರು ಸಂಗ್ರಹವಾಗಿದೆ. ಕಳೆದ 4-5 ದಿನಗಳಿಂದ ಮಲಪ್ರಭಾ ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.

    ಈ ಜಲಾಶಯದ ಮೇಲ್ಭಾಗದ ಪಶ್ಚಿಮ ಘಟ್ಟದ ಅರಣ್ಯಭಾಗ, ಬೆಳಗಾವಿ ಹಾಗೂ ಖಾನಾಪುರ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಮಲಪ್ರಭಾ ನದಿ ಮೂಲಕ ಜಲಾಶಯಕ್ಕೆ ಸಧ್ಯ 40000 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಒಟ್ಟು ಜಲಾಶಯದ ಗರಿಷ್ಟಮಟ್ಟ 2079.50 ಅಡಿಯಿದ್ದು, ಸಧ್ಯ ಜಲಾಶಯದಲ್ಲಿ 2070 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಮೇಲ್ಭಾಗದಲ್ಲಿ ಸುರಿಯುತ್ತಿರುವ ಮಳೆ ನೋಡಿದರೆ ಜಲಾಶಯದ ಒಳಹರಿವು ಹೆಚ್ಚಾಗುವ ಸಂಭವವಿದ್ದು, ಇದೇ ರೀತಿ ಮುಂದುವರೆದಲ್ಲಿ ಇನ್ನೆರಡು ದಿನದಲ್ಲಿ ಜಲಾಶಯ ಭರ್ತಿಯಾಗಲಿದೆ.

    10 ಅಡಿ ಬಾಕಿ: ಈ ಜಲಾಶಯ ತುಂಬಲು ಕೇವಲ 10 ಅಡಿ ಮಾತ್ರ ಬಾಕಿಯಿದೆ. ಮಲಪ್ರಭಾ ನದಿಯಿಂದ ಹೆಚ್ಚು ನೀರು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಅಧಿಕಾರಿಗಳು ಶುಕ್ರವಾರ ಸಂಜೆ 10 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಟ್ಟಿದ್ದಾರೆ.

    ಇದೇ ರೀತಿ ಜಲಾಶಯದ ಮೇಲ್ಭಾಗದಲ್ಲಿ ಮಳೆ ಮುಂದುವರೆದು ಒಳಹರಿವು ಹೆಚ್ಚಾದಲ್ಲಿ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುವ ಸಂಭವವಿದ್ದು, ಹೆಚ್ಚಿನ ನೀರು ಬಿಟ್ಟಿದ್ದೇ ಆದಲ್ಲಿ ಹಲವು ಗ್ರಾಮಗಳು ಜಲಾವ್ರತವಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+