Infographics: ಜುಲೈ 25ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?

ಬೆಂಗಳೂರು, ಜುಲೈ 25: ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ ಜುಲೈ 27ರವರೆಗೂ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಸಹ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿಲ್ಲ. ಆದರೆ ಇದುವರೆಗೂ ಕರುನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ರಾಜ್ಯದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.03 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.58ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.07ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.00 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.36ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.65 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.13 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.45 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.60ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 656.54ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 630.48ರಷ್ಟು ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+