Karnataka Dams Water Level Today : ಜುಲೈ 26ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 26: ಕರ್ನಾಟಕದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದರೂ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ. ಜುಲೈ 28ರವರೆಗೂ ಉತ್ತರ ಒಳನಾಡಿನ ಕಲಬುರಗಿ ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ.
ಈಗಾಗಲೇ ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ರಾಜ್ಯದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.08 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.57ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 696.07ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.02 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.42ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.64 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.28 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.51 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.70ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 657.77ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 630.51ರಷ್ಟು ನೀರು ಸಂಗ್ರಹವಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications