ಜುಲೈ 29 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜುಲೈ 29: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ಮಳೆ ಗುರುವಾರ ಬೆಳಗ್ಗೆಯಿಂದಲೇ ಮತ್ತೆ ಅಬ್ಬರಿಸುತ್ತಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಹೆಚ್ಚಾಗಿ ಸುರಿಯುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ.

ಇಂದು ರಾಜಧಾನಿ ಬೆಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ಕೆಲ ದಿನಗಳ ಕಾಲ ದೇಶದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಯಥೇಚ್ಛ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಜು.30ರವರೆಗೆ ಮಲೆನಾಡು ಭಾಗ, ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಮಳೆ ಆಗುವ ಸಂಭವವಿದೆ. ಮಂಗಳೂರು- ಕಾರವಾರ ಭಾಗದ ಸಮುದ್ರದಲ್ಲಿ ಸುಮಾರು 3.5 ಮೀಟರ್‌ ಎತ್ತರದ ಅಲೆಗಳು ತೀರಕ್ಕೆ ಬಂದಪ್ಪಳಿಸಲಿವೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೂರು ಜಿಲ್ಲೆ ವ್ಯಾಪ್ತಿಯಲ್ಲಿ ಮಾತ್ರ ಅಧಿಕ ಮಳೆಯಾಗಿದೆ

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು5550ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.33ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.77 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು694.89ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ34.561ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.32ಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.64ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು516.97ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.58ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ548.75ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 551.13 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.26ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 632.15ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+