ಜುಲೈ 3ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಜುಲೈ 03: ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದು, ಕೆಲವೆಡೆ ಮಾತ್ರ ಮಳೆಯಾಗಿದ್ದು, ಅಣೆಕಟ್ಟುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಮಳೆ ಕೊರತೆಯಿಂದ ಈಗಾಗಲೇ ಪೂರ್ವ ಹಂಗಾಮಿನ ಬೆಳೆಗಳ ಇಳುವರಿ ಕಡಿಮೆಯಾಗುವ ಆತಂಕ ನಿರ್ಮಾಣವಾಗಿದೆ. ಇನ್ನೊಂದೆಡೆ ಮುಂಗಾರು ಕೃಷಿಗೆ ಹಿನ್ನಡೆ ಉಂಟಾಗಿದ್ದು, ರೈತರು ಬಿತ್ತನೆಗೆ ಮಳೆ ಬರುವಿಕೆಗೆ ಕಾಯುತ್ತಿದ್ದಾರೆ.

ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವೀಕೆಂಡ್ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಯಾವ್ಯಾವ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.01 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 866.13ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 882.65 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.66ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 28.02 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 648.30ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 490.46ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.42 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 490.03ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 538.68ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 650.69ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 628.73 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+