ಜುಲೈ 30 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ. ದಿನಕ್ಕೆ ಒಂದೆರೆಡು ಬಾರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಇನ್ನೂ 3 ದಿನಗಳವರಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ನಿನ್ನೆ ಕಾರ್ಕಳದಲ್ಲಿ 4 ಸೆಂಟಿಮೀಟರ್ ಮಳೆಯಾಗಿದ್ದು ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂಟಿಮೀಟರ್ ಮಳೆಯಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಹವಾಮಾನ ಇಲಾಖೆ ಮೂಲಗಳು ಸದ್ಯ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದೆ ಎಂದು ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಶಿವಮೊಗ್ಗದ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಮುಂದುವರೆದಿದೆ. ಹೀಗಾಗಿ ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಗುರುವಾರ ಬೆಳಗ್ಗೆಯಿಂದ ತುಂಗಾ ಜಲಾಶಯಕ್ಕೆ ಹರಿವಿನ ಪ್ರಮಾಣ ಹೆಚ್ಚಾಗಿದೆ. ಇನ್ನು, ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ.
ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಅಧಿಕ ಪ್ರಮಾಣದ ಮಳೆಯಾಗಿದೆ. ಧಾರಾಕಾರ ಮಳೆಯಿಂದಾಗಿ ಕರಾವಳಿ ಭಾಗದ ರೈತರು ಕೂಡಾ ಕಂಗಾಲಾಗಿ ಹೋಗಿದ್ದಾರೆ. ಕೆಲವೆಡೆ ಇಂದು ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕಳೆದ ಕೆಲ ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಕುಂದಾಪುರದಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಮೂರು ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಗುರುತಿಸಿಕೊಂಡಿದ್ದ ಆಗುಂಬೆಯಲ್ಲಿ ಕಳೆದೆರೆಡು ದಿನಗಳಿಂದ ಆಗಾಗ ಸೂರ್ಯ ದರ್ಶನವಾಗುತ್ತಿದೆ, ಆದರೂ ಕೆಲವೇ ಕ್ಷಣಗಳಲ್ಲಿ ದಟ್ಟ ಮೋಡ ಕವಿದು ಭಾರೀ ಮಳೆ ಸುರಿಯುತ್ತಿದೆ.
ಈ ಬಾರಿ ಮೇ ತಿಂಗಳಿನಿಂದಲೂ ಮಳೆಯ ವಾತಾವರಣವೇ ಆವರಿಸಿಕೊಂಡಂತೆ ಆಗಿರುವುದರಿಂದ ಇದು ಮಲೆನಾಡು ಭಾಗದ ಅಡಿಕೆ ಬೆಳೆಗಾರರಿಗೆ ಭಾರೀ ತಲೆನೋವು ತರಿಸಿದ್ದು, ಈಗಾಗಲೇ ಹೆಚ್ಚಿನ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕಿನಾದ್ಯಂತ ಮಳೆ ಮುಂದುವರೆದಿದೆ.
ಭಾರೀ ಮಳೆಯ ಕಾರಣ ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಗುರುವಾರ ಮುಂಜಾನೆಯಿಂದ ತುಂಗಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಳೆಯ ಆರ್ಭಟದಿಂದ ಜಲಪಾತಗಳಿಗೆ ಮರುಜೀವ ಬಂದಿದೆ.
ಚಿಕ್ಕಮಗಳೂರಿನಲ್ಲಿ ಕಳೆದ 20 ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿತ್ತು. ಆದರೆ, ಮೊನ್ನೆ ರಾತ್ರಿಯಿಂದ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ, ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೆಹೊನ್ನೂರು, ಬಣಕಲ್ ಭಾಗದಲ್ಲಿ ಸುರಿಯುತ್ತಿರೋ ರಣಮಳೆ, ಬೀಸುತ್ತಿರುವ ಭಾರೀ ಗಾಳಿಗೆ ಜನ ಭಯಭೀತರಾಗಿದ್ದಾರೆ.
ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯ
ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 550.66ಮೀಟರ್ ಇದ್ದು, ಇಂದು5550ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 8900.33ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.74 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು694.86ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ34.65ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.43ಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.54ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು516.16ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.40ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ551.54ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 551.13 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.45ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 632.25ನೀರು ಸಂಗ್ರಹವಾಗಿದೆ.











Click it and Unblock the Notifications