Infographics: ಜುಲೈ 30ರಂದು ಕರ್ನಾಟಕದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ?
ಬೆಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಟ್ಟಹಾಸ ಮುಂದುವರಿದಿದ್ದು, 13 ಸೆಂ.ಮೀಟರ್ ಮಳೆಯಾಗಿದೆ. ಕರಾವಳಿ ಹೊರತಾಗಿ ಇತರೆ ಜಿಲ್ಲೆಗಳಲ್ಲೂ ಆಗಸ್ಟ್ 1ರವರೆಗೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿದೆ. ಕರಾವಳಿ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗದ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಒಂದರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರೆಡು ಸಲ ಸಾಧಾರಣ ಮಳೆಯಾಗಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದೆ. ಇದರ ಮಧ್ಯೆ ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಚುರುಕುಗೊಂಡ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ರಾಜ್ಯದ ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 548.16 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.94ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 890.58 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 695.96ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 38.04 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.15ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.46 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 518.52 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.90 ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 541.71ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 657.42ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 630.72ರಷ್ಟು ನೀರು ಸಂಗ್ರಹವಾಗಿದೆ.











Click it and Unblock the Notifications