ಜುಲೈ 31 ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ತಗ್ಗಿದ್ದ ಮುಂಗಾರು ಮಳೆಯ ಅಬ್ಬರ ಈಗ ಮತ್ತೆ ಚುರುಕುಗೊಂಡಿದೆ.

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರೆ, ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು , ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಆ.1ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳ ನಾಡಿನ ಕೆಲವೆಡೆ ಮಾತ್ರ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆ ಮುಂದುವರೆಯಲಿದೆ. ಆದರೆ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು , ಇನ್ನು ಎರಡು ದಿನಗಳ ಕಾಲ ಹಗುರ ಮಳೆ ನಿರೀಕ್ಷಿಸಬಹುದು ಎಂದು ಅವರು ಹೇಳಿದ್ದಾರೆ.

ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದ್ದವು. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗಿತ್ತು. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿತ್ತು.

ಈ ನದಿ ಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಭೀತಿಯೂ ಕಡಿಮೆಯಾಗಿದೆ. ಹಲವೆಡೆ ಮನೆಗಳು ಕುಸಿದಿದ್ದವು. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿದ್ದವು.

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

ಇಂದು ರಾಜಧಾನಿ ಬೆಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಕದ್ರಾ, ಮಂಚಿಕೆರೆ, ಶಿರಾಲಿ, ಸಿದ್ದಾಪುರ, ಶೃಂಗೇರಿ, ಸುಬ್ರಹ್ಮಣ್ಯ, ತಾಳಗುಪ್ಪ, ಧರ್ಮಸ್ಥಳ, ಸಾಗರ, ಭಟ್ಕಳ, ಭಾಗಮಂಡಲ, ಕೋಟಾ, ಬಾಳೆಹೊನ್ನೂರು, ಕಳಸ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 550.66ಮೀಟರ್ ಇದ್ದು, ಇಂದು 550.78ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 870.31ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.71 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು694.88ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ34.87ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 656.52ಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.53ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.7ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.30ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ551.54ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 551.54 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.45ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 632.31ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+