ಜೂನ್ 05ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಜೂನ್ 05: ನೈಋತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಇಂದು ಹಾಗೂ ನಾಳೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿಯಲಿದ್ದು, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ, ತುಮಕೂರು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇಂದು ಮುಂಜಾನೆ ಕೂಡಾ ತುಂತುರು ಮಳೆಯ ಸಿಂಚನವಾಗುತ್ತಿದೆ.

ಆದ ಕಾರಣ ಇಂದಿನಿಂದ ಮಳೆ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದು, ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

 ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 541.63 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 860.35ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 878.28 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 690.15ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 26.49 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 643.33ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 484.29 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 508.78 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.09ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 536.25ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 636.96ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 625.00 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+