ಜೂನ್ 09 ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಜೂನ್ 09: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚುತ್ತಿದೆ.

ಕಬಿನಿ, ಲಿಂಗನಮಕ್ಕಿ, ಕೆಆರ್‌ಎಸ್, ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ, ಸೂಪಾ, ಘಟಪ್ರಭಾ, ಮಲಪ್ರಭಾ ಜಲಾಶಯಗಳಲ್ಲಿ ಎಷ್ಟು ನೀರಿನ ಪ್ರಮಾಣವಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ.

ನಾಳೆಯಿಂದ 2 ದಿನ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು 11ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಡಿಆರ್​ಎಫ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಕರ್ನಾಟಕದ ಕರವಳಿಯಲ್ಲಿ ಜೂನ್ 14ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 541.30 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 860.46ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 877.72 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 690.14ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 25.66 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 643.50ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 484.62 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 508.70 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.01ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.72ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 634.58ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 624.84 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+