ಜೂನ್ 10 ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಜೂನ್ 10:ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಹಲವೆಡೆ ಮಳೆಯಾಗುತ್ತಿದ್ದು, ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಾಗಿದೆ.

ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಾಳೆಯಿಂದ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮುಂಜಾನೆಯಿಂದಲೇ ಮಲೆನಾಡು, ಕರಾವಳಿಯಲ್ಲಿ ಮಳೆ ಶುರುವಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಜೂನ್ 14ರವರೆಗೂ ಮಳೆ ತೀವ್ರವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದೂ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಡಿಆರ್​ಎಫ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಕಬಿನಿ, ಲಿಂಗನಮಕ್ಕಿ, ಕೆಆರ್‌ಎಸ್, ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ, ಸೂಪಾ, ಘಟಪ್ರಭಾ, ಮಲಪ್ರಭಾ ಜಲಾಶಯಗಳಲ್ಲಿ ಎಷ್ಟು ನೀರಿನ ಪ್ರಮಾಣವಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ. ವಿನ್ಯಾಸ ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 541.24 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 860.48ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 877.70 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 690.11ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 25.49 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 643.50ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 484.64 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 508.60 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 488.97ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.57ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 634.49ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 624.83 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+