ಜೂನ್ 12ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ರಾಜ್ಯದಲ್ಲಿ ಈಗಾಗಲೇ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಹಾಗೆಯೇ ಹಲವು ಜಲಾಶಯಗಳ ನೀರಿನ ಮಟ್ಟವು ಕೂಡ ಏರಿಕೆಯಾಗಿದೆ.

ಜೂನ್ 12ರಿಂದ ಒಂದು ವಾರಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗಲಿದೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, , ಬೆಂಗಳೂರು, ಕೊಡಗು, ಮೈಸೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಳೆ ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ರವರೆಗೆ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಆ ನಂತರವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್‌ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ. ಕೆಲವು ಜಲಾಶಯಗಳ ನೀರಿನ ಮಟ್ಟದ ಬ್ಗಗೆ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 541.12 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 860.53ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 877.65ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 690.05ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 25.16 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 643.55ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 484.65 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 508.47ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 488.77ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.44ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 634.46ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 624.81 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+