ಜೂನ್ 15ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ಬೆಂಗಳೂರು, ಜೂನ್ 15: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕಕ್ಕೆ ದಟ್ಟ ಮಳೆಗಾಲ ಕಾಲಿಟ್ಟಿದ್ದು, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ 2 ದಿನಗಳಿಂದ ಬಿಡದಂತೆ ಮಳೆ ಸುರಿಯುತ್ತಿದೆ.

ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಜೂನ್ 17ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ, ಸುಳ್ಯ, ಮೂಡಿಗೆರೆ, ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಮುಂತಾದ ಕಡೆ ಮಳೆ ಹೆಚ್ಚಾಗಿದೆ.

ಯಾವ್ಯಾವ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 541.34 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 861.13ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 877.71 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 690.19ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 25.08 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 643.83ರಷ್ಟಿದೆ.

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 484.66 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 508.45 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 488.70ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.52ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 634.50ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 624.79 ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+