• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂ 21ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ ಎಷ್ಟಿದೆ?

|
Google Oneindia Kannada News

ಕಳೆದ ಏಳು ದಿನಗಳಿಂದ ಕರಾವಳಿ ಭಾಗಗಳಲ್ಲಿ ಅಬ್ಬರಿಸುತ್ತಿದ್ದ ಮುಂಗಾರು ಮಳೆ ಸೋಮವಾರ ಕೊಂಚ ಬಿಡುವು ಪಡೆದುಕೊಂಡಿದೆ. ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಈ ಬಾರಿಯೂ ಪ್ರವಾಹದ ಆತಂಕ ಎದುರಾಗಿದೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ಸುರಿದ ಮಳೆಯಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಬೆಳಗಾವಿ ಮತ್ತು ಬಾಗಲಕೋಟೆಯ 20ಕ್ಕೂ ಹೆಚ್ಚು ಸೇತುವೆಗಳು ಮುಳುಗಿವೆ. ಜೊತೆಗೆ ನಿರಂತರ ಮಳೆಯಿಂದ ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಮಟ್ಟ ಸೋಮವಾರ ಏರಿಕೆಯಾಗಿದೆ.

ಯಗಚಿ ಜಲಾಶಯ ಭರ್ತಿಯಾಗಲು ಒಂದು ಅಡಿ ನೀರು ಮಾತ್ರ ಬಾಕಿಯಗಚಿ ಜಲಾಶಯ ಭರ್ತಿಯಾಗಲು ಒಂದು ಅಡಿ ನೀರು ಮಾತ್ರ ಬಾಕಿ

ಮಲೆನಾಡಿನ ಹೊಸನಗರ, ತೀರ್ಥಹಳ್ಳಿ, ಸಾಗರ, ಸಿದ್ಧಾಪುರ, ಶಿರಸಿ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು ತಾಲೂಕುಗಳಲ್ಲಿ ಮಳೆಯ ಅಬ್ಬರ ಇಂದು ಕೂಡ ಮುಂದುವರೆಯಲಿದ್ದು, ಶರಾವತಿ, ತುಂಗಾ, ಭದ್ರಾ, ವರಾಹಿ, ವರದಾ, ಅಘನಾಶಿನಿ ನದಿಗಳು ತುಂಬಿ ಹರಿಯುತ್ತಿವೆ. ತುಂಗಾ ಜಲಾಶಯದಿಂದ ಈಗಾಗಲೇ ನೀರನ್ನು ಹೊರಬಿಡಲಾಗಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ಜೂನ್ 21ರಂದು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ...

 ಲಿಂಗನಮಕ್ಕಿ ನೀರಿನ ಮಟ್ಟ

ಲಿಂಗನಮಕ್ಕಿ ನೀರಿನ ಮಟ್ಟ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.16 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 864.57ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 881.68 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿ ಜಲಾಶಯ ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.72ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 28.53 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 647.21ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 487.76 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 515.02 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 488.85 ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 539.10ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 647.06ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 627.86 ನೀರು ಸಂಗ್ರಹವಾಗಿದೆ.

English summary
Karnataka's Weather report and major Dams Water Level Today June 21: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X