ಜೂನ್ 30ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ಬೆಂಗಳೂರು, ಜೂನ್ 15: ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದರೂ ಕೂಡ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ.
ಮುಂಗಾರು ಮಳೆಯ ಆಗಮನದೊಂದಿಗೆ ರೈತರೂ ಬಿತ್ತನೆ ಶುರು ಮಾಡಿದ್ದಾರೆ, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ 3 ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 30ರಿಂದ ಜುಲೈ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಇನ್ನು 2 ದಿನಗಳ ಕಾಲ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.
ಯಾವ್ಯಾವ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಲಿಂಗನಮಕ್ಕಿ ಜಲಾಶಯ
ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 544.10 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 865.92ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 882.56 ಮೀಟರ್‌ನಷ್ಟಿದೆ.

ಕಬಿನಿ ಜಲಾಶಯ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 693.62ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 24.44 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 648.15ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 490.29ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 517.34 ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 489.46ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 538.96ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662.91 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 650.43ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 628.18 ನೀರು ಸಂಗ್ರಹವಾಗಿದೆ.












Click it and Unblock the Notifications