ಮೇ 27ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

ತೌತೆ, ಯಾಸ್ ಚಂಡಮಾರುತದ ಪ್ರಭಾವ ಕಡಿಮೆಯಾದರೂ ಮತ್ತೊಮ್ಮೆ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಭಾರಿ ಪ್ರಮಾಣದಲ್ಲಿ ಗಾಳಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇದಲ್ಲದೆ, ಕೇರಳ ಕರಾವಳಿಗೆ ಮುಂಗಾರು ಮಳೆ ನಿಗದಿಗಿಂತಲೂ ಮೊದಲೇ ಪ್ರವೇಶಿಸುವ ಸಾಧ್ಯತೆ ಈ ಕಾರಣಕ್ಕಾಗಿ ಹೆಚ್ಚಾಗಿದೆ ಭಾರತೀಯ ಹವಾಮಾನ ಇಲಾಖೆ ಹಾಗೂ ಸ್ಕೈಮ್ಯಾಟ್ ವೆದರ್ ವರದಿ ಮಾಡಿವೆ. ಕೇರಳ ಪ್ರವೇಶಿಸಿದ ಮಳೆ ಮಾರುತ ವಾರದೊಳಗೆ ಕರ್ನಾಟಕದಲ್ಲೂ ಆವರಿಸಲಿದೆ. ಹೀಗಾಗಿ ಜೂಣ್ ಮೊದಲ ವಾರದಲ್ಲೇ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕಾಣುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪ್ರದೇಶದಲ್ಲಿ ಅತ್ಯಧಿಕ 96 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಮೇ 27) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 31ರ ವರೆಗೂ ಮಳೆಯಾಗಲಿದೆ ಎಂಬ ವರದಿಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಬಸವಸಾಗರ(ನಾರಾಯಣಪುರ)

ಬಸವಸಾಗರ(ನಾರಾಯಣಪುರ)

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು, ಶಿವಮೊಗ್ಗ ಉಷ್ಣಾಂಶ

ಮಂಗಳೂರು, ಶಿವಮೊಗ್ಗ ಉಷ್ಣಾಂಶ

ಮಂಗಳೂರು, ಶಿವಮೊಗ್ಗ, ಮೈಸೂರು, ಬಳ್ಳಾರಿ ನಗರಗಳ ತಾಪಮಾನ ವರದಿ ಇಲ್ಲಿದೆ, ಮಳೆ ಪ್ರಮಾಣ, ಉಷ್ಣಾಂಶ, ತೇವಾಂಶ, ಗಾಳಿಯ ವೇಗ ಅಂಕಿ ಅಂಶ ಇಲ್ಲಿದೆ..

ರಾಯಚೂರು, ಚಿತ್ರದುರ್ಗ

ರಾಯಚೂರು, ಚಿತ್ರದುರ್ಗ

ರಾಯಚೂರು, ಚಿತ್ರದುರ್ಗ, ಕಲಬುರಗಿ, ಚಿಕ್ಕಮಗಳೂರು ನಗರಗಳ ತಾಪಮಾನ ವರದಿ ಇಲ್ಲಿದೆ, ಮಳೆ ಪ್ರಮಾಣ, ಉಷ್ಣಾಂಶ, ತೇವಾಂಶ, ಗಾಳಿಯ ವೇಗ ಅಂಕಿ ಅಂಶ ಇಲ್ಲಿದೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+