ರಾಜ್ಯದೆಲ್ಲೆಡೆ ಕ್ಷೀಣಿಸಿದ ಮಳೆ ಅಬ್ಬರ, ಜಲಾಶಯ ಪ್ರಮಾಣ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಹಾಗೂ ತಮಿಳುನಾಡು ಹಾಗೂ ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಾಯುಭಾರ ಕುಸಿತದಿಂದ ಇನ್ನೆರಡು ದಿನ ಮಳೆಯಾಗುವ ಸೂಚನೆಯಿದೆ. ಇದಲ್ಲದೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ,ಹಾವೇರಿಯಲ್ಲಿ ನವೆಂಬರ್ 2 ರಿಂದ 4ರವರೆಗೆ ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿಯ ಕರಿಕೆಯಲ್ಲಿ 33 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.1) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications