ರಾಜ್ಯದಲ್ಲಿ ಮಳೆ ಅಬ್ಬರ ಆರಂಭ, ಅಣೆಕಟ್ಟು ನೀರಿನ ವಿವರ

ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ನವೆಂಬರ್ 5ರಿಂದ ಮಳೆ ಮತ್ತೆ ಮುಂದುವರೆಯಲಿದೆ. ನವೆಂಬರ್ 07ರ ವರೆಗೆ ಬಹುತೇಕ ಆರು ಜಿಲ್ಲೆಗಳಲ್ಲಿ ನಿರಂತರ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ತಮಿಳುನಾಡು ಹಾಗೂ ಕೇರಳಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಅಬ್ಬರ ಕಾಣಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಎಂಬಲ್ಲಿ 78.5 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.3) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+