ರಾಜ್ಯದಲ್ಲಿ ಮಳೆ, ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ 14 ಜಿಲ್ಲೆಗಳಲ್ಲಿ ನವೆಂಬರ್ 07ರ ವರೆಗೆ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ನ. 7ರವರೆಗೂ ಒಣ ಹವೆ ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುಕ್ಕೇಡಿ ಎಂಬಲ್ಲಿ 105 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.5) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications