ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಪ್ರಮಾಣ ಎಷ್ಟು?

ಕರ್ನಾಟಕದ ಎಲ್ಲೆಡೆ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಹೆಚ್ಚು ಬಾಧಿಸುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗಿದೆ.

ಕರ್ನಾಟಕದ 14 ಜಿಲ್ಲೆಗಳಲ್ಲಿ ನವೆಂಬರ್ 07ರ ವರೆಗೆ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ನ. 7ರವರೆಗೂ ಒಣ ಹವೆ ಇರಲಿದೆ, ಹಳೆ ಮೈಸೂರು ವಿಭಾಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಬೆಂಗಳೂರಿನ ಯಲಹಂಕ ಬಳಿಯ ಕೊಡಿಗೆಹಳ್ಳಿಎಂಬಲ್ಲಿ 77 ಮಿ.ಮೀ ಹಾಗೂ ಬೆಂಗಳೂರು ದಕ್ಷಿಣ ವಿಭಾಗದ ತಾವರೆಕೆಯಲ್ಲಿ 167 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.6) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+