ಬೆಂಗಳೂರು ಮಳೆ ಸುರಿಯಲಿದೆ: ಹವಾಮಾನ ಮುನ್ಸೂಚನೆ
ಬೆಂಗಳೂರಿನಲ್ಲಿ ನವೆಂಬರ್ 12 ರಿಂದ ಮಳೆ ಸುರಿಯಲು ಆರಂಭವಾಗಿದ್ದು, ನವೆಂಬರ್ 14ರ ತನಕ ಮೋಡ ಕವಿದ ವಾತಾವರಣ, ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಮಿಕ್ಕಂತೆ ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಮಳೆ ಸುರಿದಿದೆ
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಮಳೆ ಸಂಭವಿಸುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮುಂತಾದೆಡೆ ಇಂದು ಸಾಧಾರಣ ಮಳೆ ಸುರಿದಿದೆ. ಹಲವೆಡೆ ಚಳಿ ವಾತಾವರಣ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಚೆನ್ನೈನಲ್ಲಿ ಪ್ರಬಲ ಹಿಂಗಾರು: ಕರ್ನಾಟಕದ ಮೇಲೂ ಪ್ರಭಾವ
ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಬೆಂಗಳೂರಿನ ಯಲಹಂಕದ ಜಕ್ಕೂರು ಎಂಬಲ್ಲಿ 12.5 ಮಿ.ಮೀ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.13) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.