ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರ, ಅಣೆಕಟ್ಟುಗಳ ನೀರಿನ ಮಟ್ಟ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಮಳೆ ಸಂಭವಿಸುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಭಾಗದ ಕೆಲವೆಡೆ ಇಂದು ಸಾಧಾರಣ ಮಳೆ ಸುರಿದಿದೆ. ಹಲವೆಡೆ ಚಳಿ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಚಾಮರಾಜನಗರದ ಗೊವಿಂದವಾಡಿಯಲ್ಲಿ 90. 5 ಮಿ.ಮೀ ಹಾಗೂ ಬೆಂಗಳೂರಿನ ಗೊಟ್ಟಿಗೆರೆ ಎಂಬಲ್ಲಿ 28.5 ಮಿ.ಮೀ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.17) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.