ನ.20ರಂದು ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ನವೆಂಬರ್ 25ರ ತನಕ ರಾಜ್ಯದ ಹಲವೆಡೆ ಒಣಹವೆ ಮುಂದುವರೆಯಲಿದ್ದು, ನಂತರ ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆ ರಾಜ್ಯದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಮಳೆ ಬೀಳುವ ಸಾಧ್ಯತೆ ಕ್ಷೀಣವಾಗಿದೆ. ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ 'ಲಾ ನಿನಾ' ಪರಿಣಾಮ ಭಾರಿ ಚಳಿ ಮುಂದುವರೆಯಲಿದೆ, ಮಳೆ ಬೀಳುವ ಸಂಭವ ಕಡಿಮೆ, ಮಲೆನಾಡು, ಕರಾವಳಿ ಭಾಗದಲ್ಲಿ ಚಳಿ ಕೊಂಚ ಕಡಿಮೆಯೇ ಇದೆ, ನಗರ ಪ್ರದೇಶಗಳಲ್ಲಿ ಚಳಿ ಹೆಚ್ಚಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.20) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚಳಿ ಹೆಚ್ಚಾಗಲಿದ್ದು, ಮಿಕ್ಕಂತೆ ಮುರ್ನಾಲ್ಕು ದಿನ ಬಿಸಿಲು ಕಾಣಿಸಿಕೊಳ್ಳಲಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications