ನ.24ರಂದು ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನೆರೆ ರಾಜ್ಯ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಮಳೆ ಆರಂಭವಾಗಿದೆ. ನವೆಂಬರ್ 25ರಂದು ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆಯಲಿದ್ದು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂದಿನ 24 ಗಂಟೆ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಚಂಡಮಾರುತ ಪ್ರಭಾವ ಹೆಚ್ಚಾದಂತೆ ನ.25ರಿಂದ 27ರ ತನಕ ಬೆಂಗಳೂರಿನಲ್ಲಿ ಭಾರಿ ಚಳಿ, ಗಾಳಿ ಮಳೆ ಬೀಳುವ ಸಂಭವ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.24) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚಳಿ ಹೆಚ್ಚಾಗಲಿದ್ದು, ಮಿಕ್ಕಂತೆ ಮುರ್ನಾಲ್ಕು ದಿನ ಬಿಸಿಲು ಕಾಣಿಸಿಕೊಳ್ಳಲಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications